ಬೆಂಗಳೂರು : ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಳೂಕಿನ ವಕ್ಕಲೇರಿ ಟೋಲ್ ಬಳಿ ಅಪಘಾತ ಸಂಭವಿಸಿದ್ದು, ಪೋಲೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಈಶ್ವರ್ (27), ಜನನಿ (24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಐಷಾರಾಮಿ ಆಡಿ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.