ಬೆಳಗಾವಿ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಪೃಥ್ವಿರಾಜ್ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಗಡಕರಿ (13) ಎಂದು ಗುರುತಿಸಲಾಗಿದೆ.
ಈಜು ಬಾರದೇ ಇದ್ದರೂ ಮಕ್ಕಳು ಸೈಕಲ್ ತೆಗೆದುಕೊಂಡು ಊರ ಹೊರಗಿನ ಕೃಷಿ ಹೊಂಡಕ್ಕೆ ಹೋಗಿದ್ದಾರೆ. ಮೂವರು ಮಕ್ಕಳಿಗೆ ಈಜಲು ಬರುತ್ತಿರಲಿಲ್ಲ, ಆದರೂ ಕೂಡ ನೀರಿಗೆ ಇಳಿದಿದ್ದಾರೆ. ಈ ವೇಳೆ ಈಜು ಬಾರದೇ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.