ಹೊನ್ನಾವರ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ನಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ನಲ್ಲಿ ತಡರಾತ್ರಿ ಕಾರು ಪಲ್ಟಿಯಾಗಿ ಇಬ್ಬರು ಸಜೀವ ದಹನವಾಗಿದ್ದಾರೆ. ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರು ಹಾಗೂ ಮೃತಪಟ್ಟವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.








