ಯಾದಗಿರಿ : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ವಸತಿ ಶಾಲೆಯ ಮಕ್ಕಳಿಂದಲೇ ಶೌಚಾಲಯ ಶೌಚ ಗೊಂಡಿ ಸ್ವಚ್ಛಗೊಳಿಸಿದ್ದ ಪ್ರಕರಣಗಳು ನಡೆದಿದ್ದವು. ಇದೀಗ ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವಸತಿ ಶಾಲೆಯಲ್ಲಿ ಶೌಚಾಲಯಗಳನ್ನು ಅಲ್ಲಿರುವ ಮಕ್ಕಳೇ ಪೊರಕೆ, ಬಕೆಟ್ ಹಿಡಿದು ಸ್ವಚ್ಛ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಅರಕೇರ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಯಾದಗಿರಿಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿರುವ ಘಟನೆ ನಡೆದಿದ್ದು, ಹಾಸ್ಟೆಲ್ ನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕೈಯಲ್ಲಿ ಮಕ್ಕಳು ಹಿಡಿದು ಶೌಚಾಲಯ ಕ್ಲೀನಿಂಗ್ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದಿದೆ ಯಾದಗಿರಿಯ ಅರಕೆರೆ ಗ್ರಾಮದಲ್ಲಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಈ ಒಂದು ಹಾಸ್ಟೆಲ್ ಬರುತ್ತದೆ.