ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೊತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ.
ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ನಿವಾಸಿ ದಿವಿನ್ ಹುತಾತ್ಮರಾಗಿದ್ದಾರೆ. ಈ ಮೂಲಕ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.