ಬೆಳಗಾವಿ : ಬೆಳಗಾವಿಯಲ್ಲಿ ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಣ ಮಾಡಿದ ದುಷ್ಕರ್ಮಿಗಳು 5 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ ತಳವಾಡ (46) ಎಂಬುವವರನ್ನು ಫೆ.14 ರಂದು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ.
ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.