ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಬೈಕ್ ಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ಸವಾರ ಕಮಲೇಶ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಎಂಟಿಸಿ ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಮಲೇಶ್ ಮೃತಪಟ್ಟಿದ್ದಾರೆ.
ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.