ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಕುಮ್ಟ ಹಾಗೂ ಶಿರಸೆ ನಡುವೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಬಂದ್ ಆಗಿದೆ.
ಶಿರಸಿ ತಾಲೂಕಿನ ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಉತ್ತರ ಕನ್ನಡದಲ್ಲಿ ಶಿರಸಿ ತಾಲೂಕಿನ ದೇವಿಮನೆ ಎಂಬಲ್ಲಿ ಗುಡ್ಡ ಕುಸಿದಿವೆ ರಾಷ್ಟ್ರೀಯ ಹೆದ್ದಾರಿ 766 (E) ನಲ್ಲಿ ಮತ್ತೆ ಗುಡ್ಡ ಕುಸಿದು ಬಿದ್ದಿದೆ. ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಕುಮಟಾ ಶಿರಸಿ ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತವಾಗಿದೆ.
ಇನ್ನು ಚಿಕ್ಕಮಂಗಳೂರು ಜಿಲ್ಲೆಯ ನೆಮ್ರು ಬಳಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ. ಬದಲಿ ಮಾರ್ಗದಲ್ಲಿ ತೆರಳಲು ಪೊಲೀಸರು ವಾಹನ ಸವಾರರಿಗೆ ಸೂಚನೆ ನೀಡಿದ್ದಾರೆ. ಒಂದೇ ಸ್ಥಳದಲ್ಲಿ ಗುಡ್ಡ ಪದೇ ಪದೇ ಕುಸಿಯುತ್ತಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಬಳಿ ಗುಡ್ಡ ಕುಸಿಯುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಬದಲಿ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರಿಗೆ ಪೊಲೀಸ್ರು ಸೂಚನೆ ನೀಡಿದ್ದಾರೆ. ಮಂಗಳೂರಿಗೆ ತೆರಳುವವರಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಸೂಚನೆ ನೀಡಲಾಗಿದೆ. ಬಿದರಗೋಡು, ಆಗುಂಬೆ, ಉಡುಪಿ ಮಾರ್ಗದಲ್ಲಿ ಸಂಚರಿಸಲು ಪೊಲೀಸರು ಸವಾರರಿಗೆ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಶೃಂಗೇರಿ ಠಾಣೆಯ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ.