ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನ ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೆ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.
ಹೌದು ಮುಫೀಸ್ ಮಿಯನ್ನವರ ಎಂಬಾತನಿಂದ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಯುವತಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸೆಗಿದ್ದಾನೆ ಬಳಿಕ ಧಾರವಾಡದಲ್ಲಿ ಯುವತಿಗೆ ಗೊತ್ತಾಗದಂತೆ ರಿಜಿಸ್ಟರ್ ಮದುವೆಗೆ ಮುಫೀಸ್ ಸಿದ್ಧತೆ ನಡೆಸಿದ್ದ ಎನ್ನಲಾಗಿದೆ. ಕಳೆದ ಆಗಸ್ಟ್ ನಲ್ಲಿ ಮದುವೆಯಾಗಲು ನೋಂದಣಿ ಮಾಡಿಸಲು ಸಿದ್ಧತೆ ನಡೆಸಿದ್ದ ವಿಷಯ ತಿಳಿದು ಯುವತಿಯ ಸಂಬಂಧಿಕರು ಮದುವೆಯನ್ನು ನಿಲ್ಲಿಸಿದ್ದಾರೆ.
ಬಳಿಕ ಮತ್ತೆ ಯುವತ್ತಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ನಿನ್ನೆ ಖಾಸಗಿ ವಿಡಿಯೋ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆತ ಯುವತಿಗೆ ಬೆದರಿಕೆ ಹಾಕಿದ್ದಾನೆ. ಹಿಂದೂ ಸಂಘಟನೆ ನೆರವಿನಿಂದ ಯುವತಿ ದೂರು ನೀಡಿದ್ದಾಳೆ , ಹುಬ್ಬಳ್ಳಿಯ ಕೇಶವಪುರ ಠಾಣೆಯಲ್ಲಿ ಆಫೀಸ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.








