ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಇದೀಗ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಘಟನೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವಂತಹ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಒಂದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.