ಚೆನ್ನೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ನಜರೆತ್ ಬಳಿಯ ಪಟಾಕಿ ಕಾರ್ಖಾನೆಯ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಪಟಾಕಿಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡು ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅವರನ್ನು ಕಣ್ಣನ್ ಮತ್ತು ವಿಜಯ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ನಾಲ್ವರನ್ನು ಚಿಕಿತ್ಸೆಗಾಗಿ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಸೆಲ್ವಂ, ಪ್ರಶಾಂತ್, ಸೆಂದುರ್ಕಣಿ ಮತ್ತು ಮುತ್ತುಮರಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Tamil Nadu: Two people, Muthukannan (21) and Vijay (25) died in a blast at a private firecrackers factory in Thoothukudi last evening. Four others – Selvam (21), Prashanth (20), Sendhurkani (45), Muthumari (41) were grievously injured and are undergoing treatment in Sathankulam…
— ANI (@ANI) September 1, 2024