ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೆಚ್ಬಿಆರ್ ಲೇಔಟ್ ನಲ್ಲಿ ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್(32) ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹೆಚ್.ಬಿ.ಆರ್. ಲೇಔಟ್ ನ 13ನೇ ಕ್ರಾಸ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.