ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿದ್ದು, ಕ್ಷುಲಕ ಕಾರಣಕ್ಕೆ ತಂದೆಯನ್ನೇ ಮಗನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬನ್ನೇರುಘಟ್ಟ ಜನತಾ ಕಾಲೋನಿಯಲ್ಲಿ ತಂದೆಯನ್ನೇ ಮಗನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ತಂದೆ ವೇಲಾಯುದನ್ (76) ಎಂಬುವರನ್ನು ಮಗ ವಿನೋದ್ ಕುಮಾರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಮೂಲತಃ ಕೇರಳ ರಾಜ್ಯದ ಏರಿಮಲೆ ಮೂಲದವರಾಗಿದ್ದು, ಕಳೆದ ರಾತ್ರಿ ಕ್ಷುಲಕ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ತಂದೆಗೆ ಚಾಕುವಿನಿಂದ ಇರಿದು ಮಗನೇ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ವಿನೋದ್ ನನ್ನು ಬನ್ನೇರುಘಟ್ಟ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.