ಬೆಂಗಳೂರು : ಕುಡಿದು ಪ್ರತಿದಿನ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಗ ರಾಜೇಶ್ ಎಂಬಾತನನ್ನು ತಂದೆ ಲಿಂಗಪ್ಪ ಕೊಲೆ ಮಾಡಿದ್ದಾನೆ. ಕುಡಿದು ಬಂದು ಪ್ರತಿದಿನ ಗಲಾಟೆ ಮಾಡುತ್ತಿದ್ದ. ಮಗನ ಕಿರುಕುಳ ತಾಳದೇ ಬೆಳಗಿನ ಜಾವ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಮಗನ ಕಿರುಕುಳ ತಾಳದೇ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಅಲ್ಲಿಗೂ ಬಂದ ಮಗ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.