ಬೆಂಗಳೂರು : ಬೆಂಗಳೂರಲ್ಲಿ ಇಂದು ಮತ್ತೊಂದು ಭೀಕರವಾದಂತಹ ಕೊಲೆ ನಡೆದಿದ್ದು, ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾನಗರ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಯುವತಿಯ ಕೊಲೆಗೆ ಇದುವರೆಗೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಇಂದಿರಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.