ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ಮಾಂಸದ ಅಂಗಡಿಯಲ್ಲೇ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬೇಗೂರಿನ ಎಎ ಬೀಫ್ ಸ್ಟಾಲ್ ನಲ್ಲಿ ಅಪ್ಸರ್ ಎಂಬ ವ್ಯಕ್ತಿಯನ್ನು ಮಾಂಸದ ಅಂಗಡಿಯ ಮಾಲೀಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.