ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ಕುಡಿದು ಮಲಗಿದ್ದ ವ್ಯಕ್ತಿಯ ಮೇಲೆ ಮತ್ತೊಬ್ಬ ಬಂದು ಬಿದ್ದಿದ್ದರಿಂದ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಮತ್ತು ಆರೋಪಿಯ ಗುರುತು ಪತ್ತೆಯಾಗಿಲ್ಲ. ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share.
Exit mobile version