ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿದ್ದು, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೋರ್ವ ಪತ್ನಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ.
ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿಲ್ಪಾ (39) ಎಂಬ ಮಹಿಳೆಯನ್ನು ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.