ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಪತ್ನಿಯನ್ನು ಕೊಂದು ಬಳಿಕ ಪತಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೆಗ್ಗಡೆ ನಗರದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೇಲಾರಮಣಿ (35) ಕೊಲೆಯಾದ ಮಹಿಳೆ. ಚಂದ್ರಶೇಖರ್ ಪತ್ನಿಯನ್ನೇ ಕೊಲೆಗೈದ ಪತಿ.
ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದ ಪತ್ನಿ ಯಾವಾಗಲೂ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಹೆಂಡತಿ ಮೇಲೆ ಅನುಮಾನಗೊಂಡು ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಸಂಪಿಗೆಹಳ್ಳಿ ಪೊಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.