ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಭಯಾನಕ ಹತ್ಯೆ ನಡೆದಿದ್ದು, ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್‌ ಬಳಿ ತಡರಾತ್ರಿ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಿಟಿ ಮಾರ್ಕೆಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share.
Exit mobile version