ತುಮಕೂರು : ಬೆಂಗಳೂರಲ್ಲಿ ಇಂದು ಬೆಳಿಗ್ಗೆ 35 ವರ್ಷದ ಮಹಿಳೆಗೆ ಲೋಕೇಶ್ ಅಲಿಯಾಸ್ ಲೋಹಿತಾಶ್ವ ಎಂಬ ಆರೋಪಿ 11 ಬಾರಿ ಚಾಕು ಇರಿದು ಕೊಲೆಗೆ ಯತ್ನಿಸಿದ್ದ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ರೇಖಾ (35) ಸಾವನಪ್ಪಿದ್ದಾರೆ.
ಬೆಂಗಳೂರಿನ ಸುಂಕದಕಟ್ಟೆ ಬಳಿ ಲೋಕೇಶ್ ಎಂಬಾತ ರೇಖಾಗೆ ಚಾಕು ಇರಿದಿದ್ದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿವಾಸಿ ಆಗಿರುವ ರೇಖಾಗೆ ಲೋಕೇಶ್ 11 ಬಾರಿ ಚಾಕು ಇರಿದಿದ್ದ. ಗಾಯಗೊಂಡ ರೇಖಾಳನ್ನು ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಮರೆಸಿಕೊಂಡ ಆರೋಪಿ ಲೋಕೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.