ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ತಾಯಿಗೆ ಬೈದಿದ್ದಕ್ಕೆ ಸಂಬಂಧಿ ಯುವಕನನ್ನು ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ಉಲ್ಲಾಳ ಉಪನಗರದ ರಾಮಚಂದ್ರಪ್ಪ ಲೇಔಟ್ ನಲ್ಲಿ ಘಟನೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದು ಅವಿನಾಶ್ (36) ಕೊಲೆ ಮಾಡಲಾಗಿದೆ. ಕುಡಿದು ಬಂದು ಅವಾಚ್ಯ ಶಬ್ದದಿಂದ ಬೈದು ಕಾರ್ತಿಕ್ ಎಂಬಾತ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








