ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮನೆಯಲ್ಲಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿವಮೊಗ್ಗ ನಗರದ ಮೂರನೇ ಕ್ರಾಸ್ ಮನೆಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠ (38) ಕೊಲೆಯಾಗಿರುವ ವ್ಯಕ್ತಿ. ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.