ಗುಜರಾತ್ : ದೆಹಲಿಯಲ್ಲಿ ಈ ಹಿಂದೆ ನಿರ್ಭಯಾ ಮೇಲೆ ಅತ್ಯಾಚಾರ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಗುಜರಾತ್ ನಲ್ಲಿ ಅದೇ ರೀತಿಯಲ್ಲಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ.
ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸದ್ಯ ಆರೋಪಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








