ಕಲಬುರ್ಗಿ : ಕುಡಿತದ ಚಟ ಬಿಡಿಸಲು ನೀಡಿದ್ದ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ನಡೆದಿತ್ತು. ಇದೀಗ ನಾಟಿ ಔಷಧಿ ಸೇವಿಸಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಮನೋಹರ್ (30) ಎಂದು ತಿಳಿದುಬಂದಿದೆ.
ನೀನೆಯು ಸಹ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿದ್ದರು. ಮೃತರನ್ನು ಸೇಡಂ ತಾಲ್ಲೂಕಿನ ಬುರಗಪಳ್ಳಿ ಗ್ರಾಮದ ಲಕ್ಷ್ಮೀ ನರಸಿಂಹಲು(45) ಹಾಗೂ ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್(30) ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಮೃತರು. ಇದೇ ಔಷಧಿ ಸೇವಿಸಿದ ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪನರಸಿಂಹಲು ಅವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂದಹಾಗೇ ಕುಡಿತದ ಚಟ ಬಿಡಿಸುತ್ತೇನೆ ಎಂಬುದಾಗಿ ಸಾಯಪ್ಪ ಮುತ್ಯಾ ಮದ್ಯ ವ್ಯಸನಿಗಳ ಮೂಗಿನಲ್ಲಿ ಔಷಧಿ ಹಾಕಿದ್ದರು. ಸಾಯಪ್ಪ ಮುತ್ಯಾ ನೀಡಿದಂತ ಔಷಧಿಯಿಂದ ಲಕ್ಷ್ಮೀ ಹಾಗೂ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.