ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಹೊತ್ತಿ ಉರಿದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪ ಅರಸಾಳು ಸೂಡೂರು ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.
ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾರೆ. ಕೂಡಲೇ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ. ಮಾಹಿತಿ ತಿಳಿದ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹಲವು ಪ್ರಯಾಣಿಕರ ಲಗೇಜ್ ಸುಟ್ಟುಹೋಗಿವೆ.
ಘಟನೆಯಲ್ಲಿ ಬಸ್ ಮೂವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








