ಬೆಂಗಳೂರು : ಕನ್ನಡ ಬಿಗ್ ಬಾಸ್ ಶೋ ಗೆ ಒಂದೊಲ್ಲೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಬಿಗ್ ಬಾಸ್.ಶೂಟಿಂಗ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಜಾಲಿವುಡ್ ಸ್ಟೂಡಿಯೋವನ್ನು ಮುಚ್ಚಿತ್ತು.
ಇದೀಗ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ಸಲ್ಲಿಸಿದ್ದು, KSPCB ಆದೇಶವನ್ನು ಉಲ್ಲಂಘಿಸಿ, ಅಕ್ರಮವಾಗಿ ಮರುಪ್ರಾರಂಭಗೊಂಡಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ.
ದಿನೇಶ್ ಕಲ್ಲಹಳ್ಳಿ ಅವರು, ಇ-ಮೇಲ್ ಮೂಲಕ ಕೆಎಸ್‌ಪಿಸಿಬಿ ಅಧ್ಯಕ್ಷರಿಗೆ ನೀಡಿದ ದೂರಿನ ಪ್ರಕಾರ, ಮಾಲಿನ್ಯ ನಿಯಂತ್ರಣ ಮಂಡಳಿಯು 2025ರ ಅಕ್ಟೋಬರ್ 6 ರಂದು ಮುಚ್ಚುವ ಆದೇಶವನ್ನು ಜಾರಿಗೊಳಿಸಿದ್ದರೂ, ರಾಮನಗರ ಜಿಲ್ಲಾಧಿಕಾರಿಯವರು ಯಾವುದೇ ಲಿಖಿತ ಆದೇಶವಿಲ್ಲದೆ ಮೌಖಿಕ ನಿರ್ದೇಶನದ ಮೂಲಕ ಘಟಕವನ್ನು ಅಕ್ರಮವಾಗಿ ಮರುಪ್ರಾರಂಭ ಮಾಡಲು ಅನುಮತಿ ನೀಡಿದ್ದಾರೆ. ಇದು ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT) ಆದೇಶಗಳಿಗೆ ಹಾಗೂ ಪರಿಸರ ನ್ಯಾಯ ತತ್ವಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ.








