ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಟಾಟಾ ಏಸ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಮಹದೇವ್ , ಹನುಮಂತ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಿಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.