BREAKING : ಬೆಂಗಳೂರಿನಲ್ಲಿ ಮತ್ತೊಂದು ರಾಬರಿ : ಗನ್ ತೋರಿಸಿ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ದರೋಡೆ.!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದ್ದು, ಬೆಂಗಳೂರು ನಗರದಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ದಾಸನಪುರದಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ದರೋಡೆಕೋರರು ಗನ್ ತೋರಿಸಿ ಚಿನ್ನಾಭರಣ ದೋಚಿದ್ದಾರೆ. ದಾಸನಪುರದಲ್ಲಿರುವ ರಾಮ್ ದೇವ್ ಜ್ಯುವೆಲ್ಲರಿಗೆ ನುಗ್ಗಿ ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.