ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿಯಲ್ಲಿ 31 ಲಕ್ಷದ 38 ಸಾವಿರ ರೂ. ನಗದು ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ.
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ 31 ಲಕ್ಷದ 38 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದೆ.
ಸಿನಿಮಾ ಸ್ಟೈಲ್ ನಲ್ಲಿ ದರೋಡೆರ
ಹಾಡಹಗಲೇ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಖದೀಮರು, ಸಿನಿಮಾ ಸ್ಟೈಲ್ನಲ್ಲಿ ಲಾಂಗ್ ಮತ್ತು ಮಚ್ಚುಗಳನ್ನು ತೋರಿಸಿ ವ್ಯಕ್ತಿಯನ್ನು ಬೆದರಿಸಿ ಹಣವಿದ್ದ ಬ್ಯಾಗ್ ಹಾಗೂ ಅವರ ಬೈಕನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.








