ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಸಿದ್ದಾಪುರ ದರೋಡೆ ಪ್ರಕರಣ ಹಾಗು ದಾವಣಗೆರೆಯಲ್ಲಿ PSI ಕೋಟ್ಯಂತರ ದರೋಡೆ ಪ್ರಕರಣ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಕಳ್ಳತನ ನಡೆದಿದೆ.
ಹೌದು ಸೈಬರ್ ಪ್ರಕರಣದ ಆರೋಪಿಯನ್ನ ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿ 11 ಲಕ್ಷ ಹಣದ ಬ್ಯಾಗ್ ಅನ್ನು ಹೆಡ್ ಕಾನ್ಸ್‌ಟೇಬಲ್ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ.ಹಣ ಕಳ್ಳತನ ಮಾಡಿ ಏನು ಗೊತ್ತೇ ಇಲ್ಲ ಎನ್ನುವಂತೆ ಜಬೀವುಲ್ಲಾ ಕೆಲಸ ಮಾಡ್ತಿದ್ದನಂತೆ. ಇತ್ತ ಆರೋಪಿ ಬಂಧಿಸಿದ್ದ ಇನ್ಸ್ಪೆಕ್ಟರ್ ಉಮೇಶ್ ಅಂಡ್ ಟೀಂ ಆತನನ್ನ ಜೈಲಿಗಟ್ಟಿತ್ತು.
ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ತನ್ನ ಕಾರಿನಲ್ಲಿ ಇದ್ದ ಹಣದ ಬ್ಯಾಗ್ ನಾಪತ್ತೆ ಆಗಿರುವುದನ್ನ ನೋಡಿ ಈ ಬಗ್ಗೆ ಸೈಬರ್ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾನೆ. ಆರೋಪಿಯ ಪ್ರಶ್ನೆಗೆ ಗಾಬರಿಗೊಂಡು ಪರಿಶೀಲನೆ ಮಾಡಿದಾಗ ಕಾರಿನಲ್ಲಿದ್ದ ಹಣವನ್ನ ಜಬೀವುಲ್ಲಾ ತೆಗೆದುಕೊಂಡು ಹೋಗಿರೋದು ಗೊತ್ತಾಗಿದೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಜಬೀವುಲ್ಲಾ ಹಣದ ಬ್ಯಾಗ್ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಇತ್ತ ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ. ಕೊನೆಗೆ ಜಬೀವುಲ್ಲಾನನ್ನ ತಡೆದು ಮನೆ ಸರ್ಚ್ ಮಾಡಿದಾಗ ತನ್ನ ಕೋಣೆಯ ಬೆಡ್ ಕೆಳಗೆ ಲಕ್ಷ ಲಕ್ಷ ಹಣ ಜೋಡಿಸಿಟ್ಟಿದ್ದು ಬಯಲಾಗಿದೆ.








