ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಒಂಟಿ ಮಹಿಳೆ ಮೇಲೆ ಹಲ್ಲೆಗೈದು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ತಾಲೂಕಿನ ಕಾರಿಗನೂರು ಕ್ರಾಸ್ ಬಳಿ ಒಂಟಿ ಮಹಿಳೆ ಮೇಲೆ ಹಲ್ಲೆಗೈದು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಈರಮ್ಮ (60) ಹಲ್ಲೆಗೈದು ದರೋಡೆಕೋರರು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಮನೆಗೆ ನುಗ್ಗಿದ ದರೋಡೆಕೋರರು ಮೊದಲಿಗೆ ಮಾರಕಾಸ್ತ್ರಗಳಿಂದ ಈರಮ್ಮ ಮೇಲೆ ಹಲ್ಲೆಗೈದಿದ್ದಾರೆ. ಪತಿ ಮನೆಗೆ ಬಂದಾಗ ಈರಮ್ಮ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಸದ್ಯ ಈರಮ್ಮರನ್ನು ದಾವಣಗೆರೆಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.