ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಶಿವಕುಮಾರ್ ಹಡಪದ ಎಂಬಾತ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಆರೋಪಿ ಶಿವಕುಮಾರ್ ನನ್ನು ಇದೀಗ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.