ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್ ಪಿ ರಾಜೀವ್ ಅವರು ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮಾಡಿಕೊಂಡಿದ್ದ ಅಕ್ರಮ ಬಯಲಾಗಿದೆ.
ಹೌದು ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ ಅಕ್ರಮ ಬಯಲಾಗಿದ್ದು, ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಕೊಂಡಿದ್ದ ಮಾಜಿ ಅಧ್ಯಕ್ಷ ರಾಜೀವ್, 2022 ಫೆಬ್ರವರಿ 22ರಂದು ಈ ಒಂದು ಅಕ್ರಮ ನಡೆದಿದೆ. ಈ ಒಂದು ಅಕ್ರಮದ ಕುರಿತು ಮುಡಾ ಅಕ್ರಮದ ಬಗ್ಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದು, ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದ ಎನ್ನಲಾಗಿದೆ.
ಕೇರ್ಗಳ್ಳಿ, ಬಲ್ಲಹಳ್ಳಿ ವ್ಯಾಪ್ತಿಯಲ್ಲಿ ಬಡಾವಣೆ ಮಾಡಲಾಗಿದ್ದು, 252 ನಗರ 10ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರದಿಂದ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಧಿಕಾರದ 2018ರ ಆದೇಶದ ಅನ್ವಯ ಬಡಾವಣೆ ನಿರ್ಮಾಣ ಮಾಡಲಾಗಿದ್ದು ಈ ಅಕ್ರಮದ ಇದೀಗ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದಂತಾಗಿದೆ.