ಬೆಂಗಳೂರು : ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ರಾಮನಗರ ಜಿಲ್ಲೆ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ತಮ್ಮ ಮೇಲೆ ಅತ್ಯಾಚಾರ ನಡೆಸಲಾಗಿದ್ದು, ಮುನಿರತ್ನ ಎ1 ಆರೋಪಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ತಡರಾತ್ರಿವರೆಗೂ ನಡೆದ ವಿಚಾರಣೆ ಬಳಿಕ ಪೊಲೀಸರು ಶಾಸಕ ಮುನಿರತ್ನ ಸೇರಿದಂತೆ 7 ಜನರು ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಶಾಸಕ ಮುನಿರತ್ನ ಎ1 ಆರೋಪಿಯಾಗಿದ್ದರೆ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕೇಶ್ ಎನ್ನುವವರ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದೆ.
ಮುನಿರತ್ನ ಸ್ಥಳವೊಂದಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ವಿಡಿಯೋ ಮಾಡಿಟ್ಟುಕೊಂಡು ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಪತಿ, ಮಕ್ಕಳಿಗೆ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.