ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿನ ಬಸವನಗುಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಕಟ್ಟಡದ ಟೆರೆಸ್ ಮೇಲೆ ಟೆಂಟುಗಳು ಸಂಪೂರ್ಣವಾಗಿ ಹೊತ್ತಿ ಉರಿಯುತ್ತಿರುವ ಘಟನೆ ಇದೀಗ ವರದಿಯಾಗಿದೆ.
ಈ ಒಂದು ಬೆಂಕಿ ಹಾಕ ಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದು, ಸಂಪೂರ್ಣ ಬೆಂಕಿಯ ಕೆನ್ನಾಲಿಗೆಯಿಂದ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ಜನನಿಬಿಡ ಪ್ರದೇಶವಾದ ಬಸವನಗುಡಿಯಲ್ಲಿ ಈ ಘಟನೆ ನಡೆದಿದ್ದು, ಕಟ್ಟಡವೊಂದರ ಮೇಲ್ಛಾವಣಿಯಲ್ಲಿದ್ದ ತಾತ್ಕಾಲಿಕ ಟೆಂಟ್‌ಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆಗೆ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವುದಾದರೂ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಅದೃಷ್ಟವಶಾತ್ ಪ್ರಾಣಾಪಾಯದ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ.








