ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ 7 ಗ್ಯಾಂಗ್ ನ ಸ್ಥಳಾಂತರಕ್ಕೆ ಕೋರಿ ಪ್ರಾಸಿಕ್ಯೂಷನ್ ಪರ ಅಭಿಯೋಜಕರಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಹೌದು, ನಟ ದರ್ಶನ್ ಸೇರಿ ಇತರೆ ಆರೋಪಿಗಳನ್ನು ಜಾಮೀನಿಗೂ ಮುಂಚಿನ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿದೆ.
ಈ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಜಾಮೀನಿಗೂ ಮುಂಚೆ ಇದ್ದ ಜೈಲಿಗೆ ದರ್ಶನ್ ಸೇರಿ ಇತರೆ ಆರೋಪಿಗಳನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಮೂಲಕ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.