ಬಳ್ಳಾರಿ : ರಾಜ್ಯದಲ್ಲಿ ವಾಲ್ಮೀಕಿ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಶಾಸಕ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನ ಕಳೆದುಕೊಂಡು ಜೈಲಿಗೆ ಹೋಗಿ ಬಂದಿದ್ದಾರೆ ಅಲ್ಲದೆ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಇದೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಸೇರಿದ 8 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿಕೊಂಡಿದೆ.
ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಈ ಆಸ್ತಿಗಳನ್ನು PMLA ಅಡಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.
ईडी, बेंगलुरु क्षेत्रीय कार्यालय ने कर्नाटक महर्षि वाल्मीकि अनुसूचित जनजाति विकास निगम (केएमवीएसटीडीसीएल) के धन के दुरुपयोग और हेराफेरी से संबंधित एक मामले में पूर्व मंत्री बी नागेंद्र की आवासीय/व्यावसायिक भूमि और भवन सहित लगभग 8.07 करोड़ रुपये मूल्य की चार (4) अचल संपत्तियों को… pic.twitter.com/zR0ViwfQLo
— ED (@dir_ed) December 19, 2025








