ಬೆಂಗಳೂರು : ಈ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿತ್ತು. ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಅದಾದ ಬಳಿಕ ಮೆಟ್ರೋ ಪ್ರಯಾಣದ ಟಿಕೆಟ್ ದರ ಕೂಡ ಹೆಚ್ಚಳ ಮಾಡಿ ಜನತೆಯ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿ ಆಟೋ ಪ್ರಯಾಣದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಹೌದು ಈಗಾಗಲೇ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಪ್ರಯಾಣದ ಹೆಚ್ಚಳ ಮಾಡಿದೆ. ಬಳಿಕ ಬೆಂಗಳೂರು ಜನತೆಗೆ ಬಿಗ್ ಶಾಕ್ ನೀಡಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಇದೀಗ ಬಸ್ ಮೆಟ್ರೋ ಬಳಿಕ ಆಟೋ ಪ್ರಯಾಣದ ದರದಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಅಕಸ್ಮಾತ್ ಆಟೋ ದರವು ಹೆಚ್ಚಳವಾದರೆ ಬೆಂಗಳೂರು ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ.
ಹೌದು ಮಾರ್ಚ್ 2ನೇ ವಾರದಲ್ಲಿ ಆಟೋ ಮೀಟರ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಬಿಎಂಟಿಸಿ, ಮೆಟ್ರೋ ಟಿಕೆಟ್ ಆಗಿದೆ 1 ಕಿಲೋಮೀಟರ್ ಗೆ 5 ರೂಪಾಯಿ 3 ಕಿಲೋ ಮೀಟರ್ ಗೆ 10 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಲಾಗಿದ್ದು, ಮಿನಿಮಮ್ ತರ ರೂ. 40 ಗೆ ಹೆಚ್ಚಿಸಲು ಮನವಿ ಮಾಡಲಾಗಿದೆ. ಮಾರ್ಚ್ 12ರಂದು ಡಿಸಿಪಿ ಕಚೇರಿಯಲ್ಲಿ ಈ ಕುರಿತು ಸಭೆ ನಡೆಯಲಿದೆ.