ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಅಗ್ನಿಶಾಮಕ ದಳದ ಕಾಯ್ದೆ ಅನ್ವಯವಾಗುವ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ನಿರ್ಧರಿಸಲಾಗಿದೆ. ರಾಜ್ಯದ ವಾಣಿಜ್ಯ ಕಟ್ಟಡ, ಆಸ್ಪತ್ರೆ, ಕಾಲೇಜು ಸೇರಿದಂತೆ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸುವುದು. ಜೊತೆಗೆ ಆರ್ಸಿಬಿ, ಕೆಎಸ್ಸಿಎ ವಿರುದ್ಧ ಕ್ರಿಮಿನಲ್ ಕೇಸ್ಗೆ ಅಧಿಕೃತ ಒಪ್ಪಿಗೆ ಸಿಕ್ಕಿದೆ. ಇದರೊಂದಿಗೆ ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆ ಖೈದಿಗಳಿಗೆ ಬಿಡುಗಡೆ ಭಾಗ್ಯ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.