ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಬೈಕ್ ಗೆ ಹಣ ನೀಡಿಲ್ಲವೆಂದು ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರುಪರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಬೈಕ್ ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಮಗ ಶೇಖರ್ ಎಂಬಾತ ತನ್ನ ತಂದೆ ಚೆನ್ನಾರೆಡ್ಡಿ ರಾಠೋಡ್ (50) ಕೊಲೆ ಮಾಡಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.