ಶಿವಮೊಗ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿಯಾಗಿದ್ದು, ವಾಕಿಂಗ್ ಮಾಡುವಾಗಲೇ ಹೃದಯಾಘಾತದಿಂದ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ಪೃಥ್ವಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಪೃಥ್ವಿ ನಿನ್ನೆ ವಾಕಿಂಗ್ ಮಾಡ್ತಿದ್ದಾಗ ಪೃಥ್ವಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಆದರೆ ಮಾರ್ಗಮಧ್ಯೆಯೇ ಪೃಥ್ವಿ ಸಾವನ್ನಪ್ಪಿದ್ದಾನೆ.