ಕಲಬುರಗಿ : ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಜಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಪಿಹೆಚ್ ಡಿ ಮಾಡುತ್ತಿದ್ದ ಕೋಲಾರ ಜಿಲ್ಲೆಯ ಆನಂದ್ ರೂಮ್ ನಲ್ಲಿ ಅನುಮಾಸ್ಪದವಾಗಿ ಶವ ಪತ್ತೆಯಾಗಿದೆ. ಆನಂದ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.