ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಅಮ್ಮ ಬೈದಿದ್ದಕ್ಕೆ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲ ಈ ಘಟನೆ ನಡೆದಿದ್ದು, ಬಿಬಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅಮ್ಮ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.