ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಸ್ಟಾಫ್ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ.
ಕೊಡಿಗೇಹಳ್ಳಿಯಲ್ಲಿ ವಾಸವಿದ್ದ ವಿಜಯ ಕುಮಾರಿ (32) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಾಮಯ್ಯ ಆಸ್ಪತ್ರೆಯಲ್ಲಿ ಮೃತ ವಿಜಯಕುಮಾರಿ ಸ್ಟಾಫ್ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವಿಜಯಕುಮಾರಿಗೆ ವರದಕ್ಷಿಣೆ ಕಿರುಕುಳಕ್ಕೆ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ವಿಜಯ ಕುಮಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪತಿ ಹಾಗೂ ಕುಟುಂಬಸ್ಥರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗುತ್ತಿದ್ದು,ಘಟನೆ ಕುರಿತು ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.