ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ, ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬಹು ಮಹಡಿ ಕಟ್ಟಡದಿಂದ ಟೆಕ್ಕಿಯೊಬ್ಬ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಅಸೆಟ್ಸ್ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ಬಿದ್ದು ಟಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಘಟನೆ ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.