ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಜಿಟಿ ಮಾಲ್ ನ ಮೂರನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಲ್ಲಿ ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮಾಲ್ ಓಪನ್ ಆಗುತ್ತಿದ್ದಂತೆ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಕೆ.ಪಿ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.