ಬೆಂಗಳೂರು : ಮಾವನ ಲೈಂಗಿಕ ಕಿರುಕುಳ ತಾಳದೆ ಟೆಕ್ಕಿ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯನ್ನು ಸುಹಾಸಿ ಸಿಂಗ್ (24) ಎಂದು ತಿಳಿದುಬಂದಿದೆ. ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಏನಿದು ಪ್ರಕರಣ?
ಸುಹಾಸಿ ಸಿಂಗ್ ಮತ್ತು ಪ್ರವೀಣ್ ಸಿಂಗ್ ಸಂಬಂಧಿಗಳು. ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಉತ್ತಮ ಸಂಬಂಧ ಬೆಳೆದಿದೆ. ಇಬ್ಬರು ಒಟ್ಟಿಗೆ ಹೊರಗಡೆ ಹೋಗುತ್ತಿದ್ದರು. ಹೀಗೆ ಹೊರಗಡೆ ಹೋಗಿದ್ದಾಗ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಸ್ವತಃ ಮಾವನೇ ಸೊಸೆಯನ್ನು ಮಂಚಕ್ಕೆ ಕರೆದಿದ್ದಾರೆ.
ಅವಳ ಖಾಸಗಿ ವಿಡಿಯೋ ತೋರಿಸಿ ವಿಕೃತಿಯಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇನ್ನು ನೀನು ದೈಹಿಕವಾಗಿ ತನಗೆ ಸ್ಪಂದಿಸದಿದ್ದರೆ ನಿನ್ನ ತಂದೆ, ತಾಯಿಗೆ ಖಾಸಗಿ ವೀಡಿಯೋ ಕಳುಹಿಸಿದುವುದಾಗಿ ಬೆದರಿಕೆ ಹಾಕಿದ್ದಾನೆ.ಒಂದು ವೇಳೆ ಸಹಕರಿಸದೇ ಇದ್ದರೆ ವಿಡಿಯೋವನ್ನು ಪೋಷಕರಿಗೆ ತಿಳಿಸುವುದಾಗಿ ಬೆದರಿಸುತ್ತಿದ್ದ. ಬೆದರಿಕೆಗೆ ಬಗ್ಗಿ ಪ್ರವೀಣ್ ಹೇಳಿದಾಗ ಸುಹಾಸಿ ಬರುತ್ತಿದ್ದಳು.
ಈತನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಸುಹಾಸಿ ಎಚ್‌ಎಎಲ್ ಬಳಿ ಹೋಟೆಲಿಗೆ ಪೆಟ್ರೋಲ್ ಜೊತೆ ಬಂದಿದ್ದಾಳೆ. ಜ.12 ರಂದು ಹೋಟೆಲಿನಲ್ಲಿ ಯುವತಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಹಾಸಿ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮಾವ ಪ್ರವೀಣ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.