ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಓರ್ವ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ನಾಗಣ್ಣ ಕ್ರಾಸ್ ಬಳಿ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಮಗಳು ಸ್ಥಳದಲ್ಲಿ ಸಾವನಪ್ಪಿದ್ದಾರೆ. ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ ಕರಟ್ಮಲ್ (40) ಪತ್ನಿ ಶಿಲ್ಪ (35) ಹಾಗೂ ಅವರ ಪುತ್ರಿ ರಕ್ಷಿತ (12) ಸ್ಥಳದಲ್ಲೆ ಸಾವನಪ್ಪಿದ್ದಾರೆ. ಇನ್ನು ಮಗ ದಿಗಂಬರ್ (15) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ನಿಂದರಾಜೇಶ್ವರ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ ನಾಲ್ವರು ಒಂದೇ ಬೈಕ್ನಲ್ಲಿ ಬರುವಾಗ ಈ ಅಪಘಾತ ಸಂಭವಿಸಿದೆ.








