ಕೋಲಾರ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಡಿವೈಡರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಈ ಒಂದು ಅಪಘಾತ ಸಂಭವಿಸಿದೆ.
ಡಿವೈಡರ್ ಗೆ ಕಾರು ಡಿಕ್ಕಿ ಆದ ಪರಿಣಾಮ ಚೆನ್ನೈ ಮೂಲದ ಗೋಪಿ (38) ಗೌತಮ ರಮೇಶ್ (28) ಹರಿಹರನ್ (27) ಜಯಶಂಕರ್ (30) ಎನ್ನುವವರು ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








